
ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ವಿವಿಧ ಸ್ಥಳಗಳಿಗೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ದೊಡ್ಡಬಳ್ಳಾಪುರ ಮುಖ್ಯರಸ್ತೆಯಲ್ಲಿ 2 ಕಿ.ಮೀ ಉದ್ದದ ಮೇಲ್ಸೇತುವೆ ಕಾಮಗಾರಿ, ಹೆಣ್ಣೂರು–ಬಾಗಲೂರು ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.
ಈ ವೇಳೆ ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್, ಅಭಿವೃದ್ಧಿ ವಿಭಾಗದ ಅಪರ ಆಯುಕ್ತರಾದ ಲತಾ, ಕಂದಾಯ ವಿಭಾಗದ ಅಪರ ಆಯುಕ್ತರಾದ ಅಮರೇಶ್, ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್, ಪಲ್ಲವಿ, ಮುಖ್ಯ ಅಭಿಯಂತರರಾದ ಪ್ರಕಾಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.





