
ಮಂಡ್ಯ: ಅಧಿಕಾರಿಗಳ ಅಕ್ರಮ ಭ್ರಷ್ಟಾಚಾರ ಆರೋಪ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕು ಕಚೇರಿ ಸೇರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
ಶ್ರೀರಂಗಪಟ್ಟಣದ ತಾಲೂಕು ಕಚೇರಿ, ಬೆಳಗೊಳದ ಗ್ರಾಮ ಸಹಾಯಕ ಬಸವಯ್ಯ, ಬೆಳಗೊಳದ ನಿವೃತ್ತ ರೆವಿನ್ಯೂ ಅಧಿಕಾರಿ ಉಮೇಶ್ ಅವರ ಮೈಸೂರು ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ.ಲೋಕಾಯುಕ್ತ ಅಧಿಕಾರಿಗಳಿಂದ ಕಚೇರಿ, ಮನೆಯಲ್ಲಿನ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.ಹೆಚ್ಚಿನ ಮಾಹಿತಿಗಾಗಿ ಅಧಿಕಾರಿಗಳ ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.





